🔴 LOCAL NEWS :”ಕೊಪ್ಪಳ| ವಚನಗಳ ಪಾಲನೆಯಿಂದ ಮಾತ್ರ ಸಾರ್ಥಕ ಬದುಕು ಸಾಧ್ಯ: ಹೇಮಲತಾ ನಾಯಕ”

Contents
🔴 LOCAL NEWS :”ಕೊಪ್ಪಳ| ವಚನಗಳ ಪಾಲನೆಯಿಂದ ಮಾತ್ರ ಸಾರ್ಥಕ ಬದುಕು ಸಾಧ್ಯ: ಹೇಮಲತಾ ನಾಯಕ”• ಸೆಕ್ಯುಲರ್ ವಾಯ್ಸ್ ನ್ಯೂಸ್ ,ಕೊಪ್ಪಳ: ಶಿವಶರಣ ಹಡಪದ ಅಪ್ಪಣ್ಣನವರು ರಚಿಸಿದ ವಚನಗಳನ್ನು ಕೇವಲ ಜಯಂತಿಯ ದಿನ ನೆನಪಿಸಿಕೊಳ್ಳುವುದಷ್ಟೇ ಅಲ್ಲ, ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಹಡಪದ ಅಪ್ಪಣ್ಣನವರು ಜಗಜ್ಯೋತಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು. ಜಾತಿ, ಲಿಂಗ ಭೇದವಿಲ್ಲದೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಅವರು ಸುಮಾರು 242ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಸಮಾಜಕ್ಕೆ ಆದರ್ಶಗಳನ್ನು ನೀಡಿದ್ದಾರೆ ಎಂದು ಹೇಳಿದರು.ಸಮಾಜದ ಪ್ರಗತಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಹೆಣ್ಣುಮಕ್ಕಳು ಹಾಗೂ ಯುವಜನತೆ ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚಿನ ಆಸಕ್ತಿ ವಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕೊಪ್ಪಳ ಗವಿಶ್ರೀ ಸಂಸ್ಥಾನದ ಬಿಸರಳ್ಳಿ ಶಾಖಾ ಮಠದ ಶ್ರೀ ಶಿವಶಾಂತವೀರ ಸ್ವಾಮೀಜಿ ಮಾತನಾಡಿ, ಹಡಪದ ಅಪ್ಪಣ್ಣನವರ ವಚನಗಳು ಎಂದಿಗೂ ಆರದ ಜ್ಞಾನದ ಜ್ಯೋತಿಯಾಗಿವೆ. ಅವರು ಕೇವಲ ಕ್ಷೌರಿಕ ವೃತ್ತಿ ನಡೆಸದೆ, ಮಾನವನ ಅಹಂಕಾರ ಮತ್ತು ವಿಕಾರಗಳನ್ನು ದೂರ ಮಾಡುವ ತತ್ವವನ್ನು ತಮ್ಮ ವಚನಗಳ ಮೂಲಕ ಸಾರಿದ್ದಾರೆ ಎಂದು ಹೇಳಿದರು.ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮಂಜುಮದಾರ ಅವರು ವಿಶೇಷ ಉಪನ್ಯಾಸ ನೀಡಿ, ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಸಹಚರರಾಗಿದ್ದ ಹಡಪದ ಅಪ್ಪಣ್ಣನವರು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಸುಧಾರಣೆಯ ಸಂದೇಶವನ್ನು ವಚನಗಳ ಮೂಲಕ ಜನರಿಗೆ ತಲುಪಿಸಿದರು ಎಂದು ಹೇಳಿದರು.
ಇದಕ್ಕೂ ಮುನ್ನ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ವಿ. ಗಡಾದ ಚಾಲನೆ ನೀಡಿದರು. ಮೆರವಣಿಗೆಯು ನಗರದ ಬಸವಪ್ರಿಯ ಹಡಪದ ಅಪ್ಪಣ್ಣ ಸಮುದಾಯ ಭವನದಿಂದ ಆರಂಭವಾಗಿ ಸಾಹಿತ್ಯ ಭವನದವರೆಗೆ ಸಾಗಿತು.ಕಾರ್ಯಕ್ರಮದಲ್ಲಿ ಡಾ. ಮಹಾಂತೇಶ ಮಲ್ಲನಗೌಡ್ರ, ಬಸವರಾಜ ಬಳೊಳ್ಳಿ, ಎ.ವಿ. ಕಣವಿ, ಕರ್ಣಕುಮಾರ, ಮಂಜುನಾಥ ಅಂದ್ರಾಳ, ಮೌನೇಶ ಹಡಪದ ಸೇರಿದಂತೆ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
• ಸೆಕ್ಯುಲರ್ ವಾಯ್ಸ್ ನ್ಯೂಸ್ ,ಕೊಪ್ಪಳ:
ಶಿವಶರಣ ಹಡಪದ ಅಪ್ಪಣ್ಣನವರು ರಚಿಸಿದ ವಚನಗಳನ್ನು ಕೇವಲ ಜಯಂತಿಯ ದಿನ ನೆನಪಿಸಿಕೊಳ್ಳುವುದಷ್ಟೇ ಅಲ್ಲ, ಅವುಗಳನ್ನು ನಿತ್ಯ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಬದುಕು ಸಾರ್ಥಕವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯೆ ಹೇಮಲತಾ ನಾಯಕ ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆ ವತಿಯಿಂದ ನಗರದ ಸಾಹಿತ್ಯ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಹಡಪದ ಅಪ್ಪಣ್ಣನವರು ಜಗಜ್ಯೋತಿ ಬಸವಣ್ಣನವರ ಆಪ್ತ ಕಾರ್ಯದರ್ಶಿಯಾಗಿ ಕರ್ತವ್ಯನಿಷ್ಠೆಯಿಂದ ಸೇವೆ ಸಲ್ಲಿಸಿದ್ದರು. ಜಾತಿ, ಲಿಂಗ ಭೇದವಿಲ್ಲದೆ ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದ ಅವರು ಸುಮಾರು 242ಕ್ಕೂ ಹೆಚ್ಚು ವಚನಗಳನ್ನು ರಚಿಸಿ ಸಮಾಜಕ್ಕೆ ಆದರ್ಶಗಳನ್ನು ನೀಡಿದ್ದಾರೆ ಎಂದು ಹೇಳಿದರು.
ಸಮಾಜದ ಪ್ರಗತಿಗೆ ಶಿಕ್ಷಣ ಅತ್ಯಗತ್ಯವಾಗಿದ್ದು, ಹೆಣ್ಣುಮಕ್ಕಳು ಹಾಗೂ ಯುವಜನತೆ ಉನ್ನತ ಶಿಕ್ಷಣ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳತ್ತ ಹೆಚ್ಚಿನ ಆಸಕ್ತಿ ವಹಿಸಬೇಕು. ಸರ್ಕಾರದ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಅಭಿವೃದ್ಧಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
ಕೊಪ್ಪಳ ಗವಿಶ್ರೀ ಸಂಸ್ಥಾನದ ಬಿಸರಳ್ಳಿ ಶಾಖಾ ಮಠದ ಶ್ರೀ ಶಿವಶಾಂತವೀರ ಸ್ವಾಮೀಜಿ ಮಾತನಾಡಿ, ಹಡಪದ ಅಪ್ಪಣ್ಣನವರ ವಚನಗಳು ಎಂದಿಗೂ ಆರದ ಜ್ಞಾನದ ಜ್ಯೋತಿಯಾಗಿವೆ. ಅವರು ಕೇವಲ ಕ್ಷೌರಿಕ ವೃತ್ತಿ ನಡೆಸದೆ, ಮಾನವನ ಅಹಂಕಾರ ಮತ್ತು ವಿಕಾರಗಳನ್ನು ದೂರ ಮಾಡುವ ತತ್ವವನ್ನು ತಮ್ಮ ವಚನಗಳ ಮೂಲಕ ಸಾರಿದ್ದಾರೆ ಎಂದು ಹೇಳಿದರು.
ಕೊಪ್ಪಳ ಗವಿಶ್ರೀ ಸಂಸ್ಥಾನದ ಬಿಸರಳ್ಳಿ ಶಾಖಾ ಮಠದ ಶ್ರೀ ಶಿವಶಾಂತವೀರ ಸ್ವಾಮೀಜಿ ಮಾತನಾಡಿ, ಹಡಪದ ಅಪ್ಪಣ್ಣನವರ ವಚನಗಳು ಎಂದಿಗೂ ಆರದ ಜ್ಞಾನದ ಜ್ಯೋತಿಯಾಗಿವೆ. ಅವರು ಕೇವಲ ಕ್ಷೌರಿಕ ವೃತ್ತಿ ನಡೆಸದೆ, ಮಾನವನ ಅಹಂಕಾರ ಮತ್ತು ವಿಕಾರಗಳನ್ನು ದೂರ ಮಾಡುವ ತತ್ವವನ್ನು ತಮ್ಮ ವಚನಗಳ ಮೂಲಕ ಸಾರಿದ್ದಾರೆ ಎಂದು ಹೇಳಿದರು.
ಕರ್ನಾಟಕ ಚಲನಚಿತ್ರ ಅಕಾಡೆಮಿ ಸದಸ್ಯೆ ಸಾವಿತ್ರಿ ಮಂಜುಮದಾರ ಅವರು ವಿಶೇಷ ಉಪನ್ಯಾಸ ನೀಡಿ, ಅನುಭವ ಮಂಟಪದಲ್ಲಿ ಬಸವಣ್ಣನವರ ಆಪ್ತ ಸಹಚರರಾಗಿದ್ದ ಹಡಪದ ಅಪ್ಪಣ್ಣನವರು ಸಮಾನತೆ, ಮಾನವೀಯತೆ ಹಾಗೂ ಸಾಮಾಜಿಕ ಸುಧಾರಣೆಯ ಸಂದೇಶವನ್ನು ವಚನಗಳ ಮೂಲಕ ಜನರಿಗೆ ತಲುಪಿಸಿದರು ಎಂದು ಹೇಳಿದರು.
ಇದಕ್ಕೂ ಮುನ್ನ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ವಿ. ಗಡಾದ ಚಾಲನೆ ನೀಡಿದರು. ಮೆರವಣಿಗೆಯು ನಗರದ ಬಸವಪ್ರಿಯ ಹಡಪದ ಅಪ್ಪಣ್ಣ ಸಮುದಾಯ ಭವನದಿಂದ ಆರಂಭವಾಗಿ ಸಾಹಿತ್ಯ ಭವನದವರೆಗೆ ಸಾಗಿತು.
ಇದಕ್ಕೂ ಮುನ್ನ ಹಡಪದ ಅಪ್ಪಣ್ಣನವರ ಭಾವಚಿತ್ರದ ಮೆರವಣಿಗೆಗೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ವಿ. ಗಡಾದ ಚಾಲನೆ ನೀಡಿದರು. ಮೆರವಣಿಗೆಯು ನಗರದ ಬಸವಪ್ರಿಯ ಹಡಪದ ಅಪ್ಪಣ್ಣ ಸಮುದಾಯ ಭವನದಿಂದ ಆರಂಭವಾಗಿ ಸಾಹಿತ್ಯ ಭವನದವರೆಗೆ ಸಾಗಿತು.
