🔴BREAKING NEWS :” ಕೊಪ್ಪಳ | ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಕೊಪ್ಪಳ ಮೂಲದ ಒಂದೇ ಕುಟುಂಬದ ಮೂವರು ದುರ್ಮರಣ”

Contents
🔴BREAKING NEWS :” ಕೊಪ್ಪಳ | ತೀರ್ಥಹಳ್ಳಿಯಲ್ಲಿ ಗುಡ್ಡ ಕುಸಿತ: ಕೊಪ್ಪಳ ಮೂಲದ ಒಂದೇ ಕುಟುಂಬದ ಮೂವರು ದುರ್ಮರಣ”•ಸೆಕ್ಯುಲರ್ ವಾಯ್ಸ್ ನ್ಯೂಸ್ ಕೊಪ್ಪಳ :ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಿರಂತರವಾಗಿ ಸುರಿದ ಭಾರೀ ಮಳೆಯಿಂದ ಗುಡ್ಡ ಕುಸಿದು, ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಕಕ್ಕರಗೋಳ ಗ್ರಾಮದ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದುರ್ಘಟನೆ ಭಾನುವಾರ ಮುಂಜಾನೆ ನಡೆದಿದೆ.ಮೃತರನ್ನು ಮಲ್ಲಿಕಾರ್ಜುನ (35), ಅವರ ಪತ್ನಿ ನಾಗವೇಣಿ (28) ಹಾಗೂ ಮೂರು ವರ್ಷದ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.ಪಶ್ಚಿಮ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಗುಡ್ಡ ಕುಸಿದು, ಶೆಡ್‌ನಲ್ಲಿ ಮಲಗಿದ್ದ ಕುಟುಂಬದ ಮೇಲೆ ಮಣ್ಣು ಮತ್ತು ಬಂಡೆಗಳು ಬಿದ್ದ ಪರಿಣಾಮ ಮೂವರೂ ಮಣ್ಣಿನಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಕ್ಷಣೆಗೆ ಮುಂದಾದ ಓರ್ವ ವ್ಯಕ್ತಿ ಗಾಯಗೊಂಡಿದ್ದು, ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಿಬ್ಬಂದಿ ಹಾಗೂ ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಅವಶೇಷಗಳ ಅಡಿ ಸಿಲುಕಿದ್ದ ಮೂವರ ಮೃತದೇಹಗಳನ್ನು ಹೊರತೆಗೆದಿದ್ದು, ಶೆಡ್‌ನಲ್ಲಿ ಇನ್ನೂ ಯಾರಾದರೂ ಸಿಲುಕಿರುವ ಸಾಧ್ಯತೆ ಹಿನ್ನೆಲೆಯಲ್ಲಿ ಶೋಧ ಕಾರ್ಯ ಮುಂದುವರಿದಿದೆ.ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಭೂಕುಸಿತದ ಅಪಾಯ ಹೆಚ್ಚಾಗಿದ್ದು, ಗುಡ್ಡದ ಸಮೀಪ ವಾಸಿಸುವವರು ಹಾಗೂ ಮಲೆನಾಡು ಪ್ರದೇಶದಲ್ಲಿ ಸಂಚರಿಸುವವರು ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.
