🔴 LOCAL NEWS : “ಕುಕನೂರ | ಆ.4ರಂದು ‘ಜ್ಯೋತಿ ಆಗು ಜಗಕೆಲ್ಲ’ ಜಾನಪದ ವೈಭವ ಜಿಲ್ಲೆಯ ವಿವಿಧ ಕಲಾವಿದರಿಂದ ಜಾನಪದ ಕಲಾ ಪ್ರದರ್ಶನ”
•ಸೆಕ್ಯುಲರ್ ವಾಯ್ಸ್ ನ್ಯೂಸ್, ಕುಕನೂರು:
ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಬೆಂಗಳೂರು ಹಾಗೂ ಕರ್ನಾಟಕ ಜಾನಪದ ಅಕಾಡೆಮಿ, ಬೆಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ‘ಜ್ಯೋತಿ ಆಗು ಜಗಕೆಲ್ಲ – ಜ್ಞಾನಪದ ಬೆಳಗು, ಹಾಡುಹಕ್ಕಿಗಳ ಜಾನಪದ ವೈಭವ’ ಸಾಂಸ್ಕೃತಿಕ ಕಾರ್ಯಕ್ರಮವು ಆಗಸ್ಟ್ 4ರಂದು ಸಂಜೆ 5 ಗಂಟೆಗೆ ಪಟ್ಟಣದ ಅನ್ನದಾನೇಶ್ವರ ಮಠದ ಸಭಾಭವನದಲ್ಲಿ ನಡೆಯಲಿದೆ.
ಈ ಕುರಿತು ಭಾನುವಾರ ಪತ್ರಿಕಾ ಪ್ರಕಟಣೆ ನೀಡಿರುವ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಹಾಗೂ ಜಾನಪದ ಕಲಾವಿದ ಡಾ. ಜೀವನಸಾಬ ವಾಲಿಕಾರ ಬಿನ್ನಾಳ ಅವರು, ಜಾನಪದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗಗಳ ಜಾನಪದ ಕಲಾವಿದರು ತಮ್ಮ ವಿಶಿಷ್ಟ ಕಲಾ ಪ್ರಕಾರಗಳನ್ನು ಪ್ರದರ್ಶಿಸಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮಕ್ಕೆ ಮುಂಡರಗಿ ಅನ್ನದಾನೇಶ್ವರ ಶಾಖಾ ಮಠದ ಪೀಠಾಧಿಪತಿ ಡಾ. ಮಹಾದೇವ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಮಾಜಿ ಸಚಿವರು ಹಾಗೂ ಯಲಬುರ್ಗಾ ಕ್ಷೇತ್ರದ ಶಾಸಕ ಬಸವರಾಜ ರಾಯರೆಡ್ಡಿ ಉದ್ಘಾಟಿಸಲಿದ್ದಾರೆ.
ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಡಾ. ಗೊಲ್ಲಹಳ್ಳಿ ಶಿವಪ್ರಸಾದ್ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಲೀಲಾವತಿ ಪ್ರವೀಣ್ ಕುಮಾರ್ ಮುಧೋಳ, ಉಪಾಧ್ಯಕ್ಷೆ ಮಂಜುಳಾ ಯಲ್ಲಪ್ಪ ಕಲ್ಮನಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರಣಕುಮಾರ್, ಯಂಕಣ್ಣ ಯರಾಸಿ, ಕಳಕಪ್ಪ ಕಂಬಳಿ, ಶಂಭು ಜೋಳದ್, ಈರಪ್ಪ ಕೂಡಗುಂಟಿ, ಸಂಗಮೇಶ್ ಗುತ್ತಿ, ಪ್ರಶಾಂತ್ ಆರಬೆರಳಿನ, ಸಂಗಮೇಶ್ವರ ಕಲ್ಮಠ, ವೀರಯ್ಯ ತೋಂಟದಾರ್ಯಮಠ, ಶರಣಪ್ಪ ವಡಗೇರಿ, ಮಹಬೂಬ್ ಕಿಲ್ಲೆದಾರ್, ಕಳಕಪ್ಪ ಕುಂಬಾರ್, ಮಹೇಶ್ ಸಬರದ್, ಮಾರುತಿ ಎಸ್. ತಳವಾರ್, ಸುರೇಶ್ ಅಬ್ಬಿಗೇರಿ, ಡಾ. ಕೆ.ಬಿ. ಬ್ಯಾಳಿ, ಫಕೀರಪ್ಪ ವಜ್ರಬಂಡಿ ಹಾಗೂ ಶರಣಯ್ಯ ಇಟಗಿ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ ಎಂದರು.