ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂವಿಧಾನ ಓದು ಕಾರ್ಯಕ್ರಮ

ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಕಾಲೇಜು ಅಧ್ಯಾಪಕರ ಸಂಘದ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರದ ವಿಶ್ವವಿದ್ಯಾಲಯ ಮೌಲ್ಯಮಾಪನ ಕೇಂದ್ರದಲ್ಲಿ ಮೌಲ್ಯ ಮಾಪನ ಕಾರ್ಯದಲ್ಲಿ ನಿರತರಾದ ಪ್ರಾಧ್ಯಾಪಕರು ಇಂದು ಸಂವಿಧಾನ ಓದು ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಚರಿಸದರು.
ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಹಾಗೂ ವಿವಿಧ ವಿಷಯಗಳ ಅಧ್ಯಕ್ಷರು, ಹಾಗೂ ಮಹಾವಿದ್ಯಾಲಯಗಳ ಪ್ರಾಚಾರ್ಯರು ಭಾಗವಹಿಸಿದ್ದರು ಎಂದು ಭೌತಶಾಸ್ತ್ರ ಪರೀಕ್ಷಾ ಮಂಡಳಿಯ ಅಧ್ಯಕ್ಷರಾದ ಡಾ. ಮೋಹನರಾಜ್ ಪತ್ತಾರ ಪತ್ರಿಕಾ ಪ್ರಕಟಣೆಗಾಗಿ ತಿಳಿಸಿದ್ದಾರೆ.
